ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿ ಸ್ಯಾಮ್ಸಂಗ್ ಇನೋವೇಶನ್ ಕ್ಯಾಂಪಸ್

ಬೆ0ಗಳೂರು:  ಕೃಷಿ ವಿಶ್ವವಿದ್ಯಾಲಯವು ಸ್ಯಾಮ್ಸಂಗ್ ಇನೋವೇಶನ್ ಕ್ಯಾಂಪಸ್, ಹಂತ–III (ನವದೆಹಲಿ) ರವರ ಸಹಯೋಗದಲ್ಲಿ, ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇSSI, ನವದೆಹಲಿ) ಮತ್ತು ಮ್ಯಾಪಿಂಗ್ ಸ್ಕಿಲ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ (ನೊಯ್ಡಾ) ಇವರ ಸಹಭಾಗಿತ್ವದಲ್ಲಿ “ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಡಾಕ್ಟೋರಲ್ ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ (ಂI) ತರಬೇತಿ ಕಾರ್ಯಕ್ರಮ”ವನ್ನು ಸೆಪ್ಟೆಂಬರ್ 1ರಿಂದ ಡಿಸೆಂಬರ್ 15, 2025 ರವರೆಗೆ ಬೆಂಗಳೂರು ಜಿಕೆವಿಕೆ ಆವರಣದಲ್ಲಿ ಆಯೋಜಿಸಲಾಗಿತ್ತು.

ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಡಾಕ್ಟೋರಲ್ ವಿದ್ಯಾರ್ಥಿಗಳಿಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು ಹಾಗೂ ತಾಂತ್ರಿಕ ಜ್ಞಾನವನ್ನು ಒದಗಿಸಿ, ಭವಿಷ್ಯದಲ್ಲಿ ಉದ್ಯೋಗ ಮತ್ತು ಉನ್ನತ ಶಿಕ್ಷಣಕ್ಕೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಈ ತರಬೇತಿಯ ಉದ್ದೇಶವಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ 22 ಸ್ನಾತಕೋತ್ತರ ವಿಭಾಗಗಳಿಂದ ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಸ್ಯಾಮ್ಸಂಗ್ ಇನೋವೇಶನ್ ಕ್ಯಾಂಪಸ್ (SIಅ) – ಹಂತ III ಪ್ರಮಾಣಪತ್ರ ವಿತರಣಾ ಸಮಾರಂಭವನ್ನು 2026ರ ಫೆಬ್ರವರಿ 5ರಂದು ಬೆಂಗಳೂರು ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಸೇರಿದಂತೆ ಒಟ್ಟು 6 ಕಾಲೇಜುಗಳಿಂದ ಸುಮಾರು 1500 ವಿದ್ಯಾರ್ಥಿಗಳು ಭಾಗವಹಿಸಿದ್ದರು. 
ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಎಸ್. ಲಾಡ್ ಅವರು ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ವಿವರಿಸಿದರು. ಕರ್ನಾಟಕ ವಿಧಾನ ಪರಿಷತ್ತಿನ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಬಸವರಾಜ ಹೊರಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಸರೋಜ್ ಅಪಾಟೋ, ಉಪಾಧ್ಯಕ್ಷರು, ಇSಅI; ಶ್ರೀ ಸಂಗ್ ಪಿಲ್ ಚುನ್, ಕಾರ್ಪೊರೇಟ್ ಉಪಾಧ್ಯಕ್ಷರು ಹಾಗೂ ಅಖಔ ಮುಖ್ಯಸ್ಥರು, ಸ್ಯಾಮ್ಸಂಗ್ ಹಾಗೂ ಶ್ರೀ ಶುಭಮ್ ಮುಖರ್ಜಿ, ಸಂವಹನ ಮತ್ತು ಅSಖ ಮುಖ್ಯಸ್ಥರು, ಸ್ಯಾಮ್ಸಂಗ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಎಸ್. ವಿ. ಸುರೇಶ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.