ಸ್ಕೋನ್‌ಸ್ಟಾಟ್ ಸೇಂಟ್ ಮೇರಿಸ್ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಸಮಾರಂಭ

ಬೆಂಗಳೂರು: ಪೀಣ್ಯ ದಾಸರಹಳ್ಳಿ ಸಮೀಪದ ರುಕ್ಮಿಣಿ ನಗರದ ಸ್ಕೋನ್‌ಸ್ಟಾಟ್ ಸೇಂಟ್ ಮೇರಿಸ್ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಆಯೋಜಿಸಲಾದ 'ಸ್ಕೋನ್ ಫಿಯೆಸ್ಟಾ' ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಯಿತು. 

ಇಸ್ರೋದ ನಿವೃತ್ತ ಗ್ರೂಪ್ ನಿರ್ದೇಶಕ ಎಂ.ಎಸ್. ಶ್ರೀನಿವಾಸನ್, ಶಾಸಕ ಎಸ್. ಮುನಿರಾಜು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ನೀಡಿದರು. ಆಮೇಲೆ ಪೀಣ್ಯ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಿತ್ರೇಶ್, ಪ್ರಾಂಶುಪಾಲ ಲಿಝಿ, ಜೋಯಿಸ್ ಸಿಸ್ಟರ್,ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮುಂತಾದವರಿದ್ದರು.