ಹಾಸ್ಟೆಲ್ ನ 13ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ,
ದೊಡ್ಡಬಳ್ಳಾಪುರ : ಹಾಸ್ಟೆಲ್ ನ 13ನೇ ಮಹಡಿಯಿಂದ ಹಾರಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದ ಗೀತಂ ವಿಶ್ವವಿದ್ಯಾಲದಯದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಯಲದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಯನಾ(20) ಆತ್ಮಹತ್ಯೆಗೆ ಶರಣಾದ ದುರ್ದೈವಿ ಯುವತಿ.
ಮೃತ ವಿದ್ಯಾರ್ಥಿನಿ ಗೀತಂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದು, ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು, ಸರ್ಜಾಪುರದ ಮೂಲದ ವೆಂಕಟೇಶ್ ಎಂಬುವರ ಮಗಳು, ವಿಶ್ವವಿದ್ಯಾಲಯದಲ್ಲಿರುವ ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು.
ಆತ್ಮಹತ್ಯೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ.